ಸಿಡಿಲಾಘಾತದಿಂದ ತಪ್ಪಿಸಿಕೊಳ್ಳುವುದು ಹೇಗೆ?

ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ, ಅದರಿಂದಾಗುವ ಸಾವು-ನೋವುಗಳನ್ನು ತಪ್ಪಿಸಬಹುದು.

ಬೇಸಿಗೆಯಲ್ಲಿ ಬರುವ ಮಳೆಗಳು ಸಾಮಾನ್ಯವಾಗಿ ಗುಡುಗು-ಮಿಂಚಿನಿಂದ ಕೂಡಿರುತ್ತವೆ. ಆದರಿಂದ ಈ ದಿನಗಳಲ್ಲಿ ಮಳೆ ಬರುವ ಸಮಯದಲ್ಲಿ ಜನರು ಬಹಳ ಎಚ್ಚರದಿಂದ ಇರುವುದು ಅತ್ಯಂತ ಮುಖ್ಯ.

ಈ ಕೆಳಗಿನ ಕೆಲವು ಅಂಶಗಳನ್ನು ನೀವು ಅನುಸರಿಸಿದರೆ ಸಿಡಿಲಿನ ಅಪಾಯದಿಂದ ರಕ್ಷಿಸಿಕೊಳ್ಳಲು ಸಹಾಯಕವಾಗಬಲ್ಲದು.


ಸಿಡಿಲಾಘಾತದಿಂದ ತಪ್ಪಿಸಿಕೊಳ್ಳುವ ರಕ್ಷಣಾ ಕ್ರಮಗಳು:

➤ ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ, ನಿಲ್ಲ ಬೇಡಿ.

➤ ತಗ್ಗು ಪ್ರದೇಶ ಇಲ್ಲದೆ ಬಯಲಿನಲ್ಲೆ ಇರಬೇಕಾದರೆ. ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ, ಇದು ಮಿಂಚಿನಿಂದ ಮೆದುಳಿಗೂ,ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ.

➤ ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ, ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು.(ಯಾಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.) 

➤ ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿಯಿರಿ.

➤ ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ, ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ (ಏಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷನನ್ನೇ ಆರಿಸಿಕೊಳ್ಳುತ್ತದೆ.)

➤ ಕೆರೆಯಲ್ಲಿ ಈಜುವುದು, ಸ್ನಾನ ಮಾಡುವುದು ಬೇಡ, ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ.

➤ ವಿದ್ಯುತ್ ಕಂಬ, ಎಲಕ್ಟ್ರಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್ ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ.

➤ ತಂತಿ ಬೇಲಿ, ಭಟ್ಟ, ಒಣಹಾಕುವ ತಂತಿ, ಇವುಗಳಿಂದ ದೊರವಿರಿ.

➤ ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸನ್ನು ಸ್ವಚ್ಛ ಮಾಡುವ ಸಾಹಸ ಬೇಡ.

➤ ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ.

➤ ಗುಡುಗು-ಸಿಡಿಲಿನ ಸಂದರ್ಭದಲ್ಲಿ ಫೋನ್ ಮಾಡಬೇಡಿ. ಅದನ್ನು ಚಾರ್ಜ್ ಮಾಡುವ ಸಹಸವೂ ಬೇಡ.

➤ ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು.

➤ ಕಂಪ್ಯೂಟರ್ ಗಳಿಂದ ದೂರ ಇರಿ.

➤ ಮನೆಯ ಕಾoಕ್ರೇಟ್ ಗೋಡೆಗಳನ್ನು ಸ್ಪೆರ್ಶಿಸದೆ.ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ.
Post a Comment (0)
Previous Post Next Post